ತಿತಿಮತಿ ಸೇತುವೆ ಕುಸಿತ: ಕೊಡಗು-ಮೈಸೂರು ಹೆದ್ದಾರಿ ಬಂದ್

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿಯಲ್ಲಿ ಸೇತುವೆ ಕುಸಿದು ಕೊಡಗು-ಮೈಸೂರು ಹೆದ್ದಾರಿ ಬಂದ್ ಆಗಿದೆ. ಒಂದು ವಾರದಿಂದ ಸುರಿಯುತ್ತಿರುವ ಮಹಾಮಳೆಗೆ ಸೇತುವೆ ಕುಸಿದ ಪರಿಣಾಮ ಮೈಸೂರು, ಪಿರಿಯಾಪಟ್ಟಣ, ಹುಣಸೂರು ರಸ್ತೆ ಸಂಪರ್ಕ ಕಡಿತಗೊಂಡಿದೆ.
ಒಂದು ತಿಂಗಳ ಹಿಂದೆ ಸಂಸದ ಪ್ರತಾಪ್ ಸಿಂಹರಿಂದ ಹೊಸ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿತ್ತು. ಈ ಹಿನ್ನೆಲೆಯಲ್ಲಿ ಹೊಸ ಸೇತುವೆ ನಿರ್ಮಾಣ ಸಲುವಾಗಿ ಹಳೆ ಸೇತುವೆ ಒಡೆದು ಹಾಕಿ, ತಾತ್ಕಾಲಿಕ‌ ಸೇತುವೆ ನಿರ್ಮಿಸಲಾಗಿತ್ತು. ಇದೀಗ ಈ ಸೇತುವೆಯೂ ಕುಸಿದಿದ್ದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv