ಹಣ ಹಂಚುತ್ತಿದ್ದ ಇಬ್ಬರು ಜೆಡಿಎಸ್​ ಕಾರ್ಯಕರ್ತರ ಬಂಧನ

ಕೊಡಗು: ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರು ಜೆಡಿಎಸ್ ಕಾರ್ಯಕರ್ತರನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಹಣ ಹಂಚುತ್ತಿದ್ದ ಜೆಡಿಎಸ್​ ಕಾರ್ಯಕರ್ತರನ್ನು ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾಧಿಕಾರಿಗೆ ಒಪ್ಪಿಸಿದ್ದಾರೆ. ಕೂಡಿಗೆ ಗ್ರಾ.ಪಂ. ಸದಸ್ಯ ಕೆ.ಟಿ.ವಿಶ್ವನಾಥ್ ಹಾಗೂ ಹೆಬ್ಬಾಲೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ್​ ಎನ್.ಎನ್. ಧರ್ಮಪ್ಪ ಹಣ ಹಂಚುತ್ತಿದ್ದವರು. ಜೆಡಿಎಸ್ ಅಭ್ಯರ್ಥಿ ಬೋಜೇಗೌಡರಿಗೆ ಪರ ಮತ ಹಾಕುವಂತೆ ಶಾಲಾ ಕಾಲೇಜುಗಳಲ್ಲಿ ಪ್ರತೀ ಮತದಾರರಿಗೆ ಸಾವಿರ ರೂಪಾಯಿ ಹಂಚುತ್ತಿದ್ದರು. ಈ ವೇಳೆ ಧರ್ಮಪ್ಪನನ್ನ  ಚುನಾವಣಾಧಿಕಾರಿ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv