ಅಂಗಡಿ ಬೀಗ ಮುರಿದು, ₹10 ಲಕ್ಷ ನಗದು ಕದ್ದು ಕಳ್ಳರು ಪರಾರಿ..!

ಬಳ್ಳಾರಿ: ಶಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಭಾರೀ ಕಳ್ಳತನ ನಡೆದಿದೆ. ಶುಕ್ರವಾರ ತಡರಾತ್ರಿ ಎರಡು ಅಂಗಡಿಗಳಿಗೆ ನುಗ್ಗಿದ ಕಳ್ಳರು ಅಂದಾಜು ₹10 ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ. ರಾಜಶೇಖರ ಶೆಟ್ಟಿ ಅವರ ಅಂಗಡಿ ಸೇರಿದಂತೆ ಅದರ ಪಕ್ಕದ ಬಟ್ಟೆ ಅಂಗಡಿಯಲ್ಲೂ ಕಳ್ಳರು ತಮ್ಮ ಕರಾಮತ್ತು ತೋರಿಸಿದ್ದಾರೆ. ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv