20 ಕೆ.ಜಿ. ಗಾಂಜಾ ಸೀಜ್, ಓರ್ವ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿ, ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಮಾರಾಟದ ಜಾಲವನ್ನ ಬೇಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 20 ಕೆಜಿ ಗಾಂಜಾ ಸೀಜ್ ಮಾಡಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ ತೌಫೀಖ್ ಸುದರ್ಗಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಸಗಟು ರೂಪದಲ್ಲಿ ನಗರದಲ್ಲಿ ತಂದು ಮಾರಾಟ ಮಾಡುವಾಗ ತೌಫೀಖ್ ಖಾಕಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದಾನೆ. ವಿಶಾಖಪಟ್ಟಣದಿಂದ ರೈಲ್ವೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು,ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv