ಪೋಷಕರಿಂದ ತಪ್ಪಿಸಿಕೊಂಡಿದ್ದ ಬಾಲಕ ಹೊಳಲ್ಕೆರೆಯಲ್ಲಿ ಪತ್ತೆ

ಚಿತ್ರದುರ್ಗ: ನಿನ್ನೆ ದಾರಿ ತಪ್ಪಿಸಿಕೊಂಡಿದ್ದ ಧಾರವಾಡ ಜಿಲ್ಲೆಯ ಕೇಶವಾಪುರ ಗ್ರಾಮದ 10 ವರ್ಷದ  ಬಾಲಕ ಬಸವರಾಜ್​​ ಪತ್ತೆಯಾಗಿದ್ದಾನೆ. ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ರೈಲ್ವೆ ನಿಲ್ದಾಣದಲ್ಲಿ ಬಾಲಕ ಪತ್ತೆಯಾಗಿದ್ದಾನೆ. ಗುಡಿಗೇರಿ ರೈಲು ನಿಲ್ದಾಣದಲ್ಲಿ ಇಳಿಯಬೇಕಿದ್ದ ಬಸವರಾಜ್​, ನಿದ್ದೆ ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಜಾಜಾರು ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾನೆ. ರೈಲ್ವೆ ಪೊಲೀಸರು ಬಾಲಕನನ್ನು ರಕ್ಷಣೆ ಮಾಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗೆ ಹಸ್ತಾಂತರಿಸಿದ್ದಾರೆ. ಬಾಲಕ ತನ್ನ ತಾಯಿ ಕಲಾವತಿ, ತಂದೆ ಶಂಕರಪ್ಪ ಎಂದು ಅಧಿಕಾರಿಗಳಿಗೆ ಹೇಳಿದ್ದಾನೆ. ಪೋಷಕರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮನವಿ ಮಾಡಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv