09 Jul 2018
ತುಮಕೂರು: 2019ರ ಲೋಕಸಭಾ ಚುನಾವಣೆಯಲ್ಲಿ, ತುಮಕೂರು ಕ್ಷೇತ್ರವನ್ನ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ಗೆ ಬಿಟ್ಟುಕೊಡಬಾರದು. ಒಂದು ವೇಳೆ ಬಿಟ್ಟುಕೊಟ್ರೆ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ವರಿಷ್ಠರು ಜೆಡಿಎಸ್ಗೆ ಟಿಕೆಟ್ ಕೊಟ್ರೆ, ನನ್ನದೊಂದು ಅರ್ಜಿ ಇದ್ದೇ ಇರುತ್ತೆ. ಅದು ಕಾಂಗ್ರೆಸ್ ಆಗಿರಬಹುದು ಇಲ್ಲವೇ ಬೇರೆ ಪಕ್ಷ ಆಗಿರಬಹುದು. ಈ ವಿಚಾರದಲ್ಲಿ ಹೈ ಕಮಾಂಡು ಇಲ್ಲ, ಲೋ ಕಮಾಂಡು ಇಲ್ಲ ಎನ್ನುವ ಮೂಲಕ ರಾಜ್ಯ ನಾಯಕರಿಗೆ ರಾಜಣ್ಣ ಟಾಂಗ್ ಕೊಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆ.ಎನ್.ರಾಜಣ್ಣರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv