ಮಳೆಯಿಂದ ಶಿಥಿಲಗೊಂಡ ಗೋಡೆ ಕುಸಿದು ಮಹಿಳೆ ಸಾವು

ಚಿಕ್ಕಮಗಳೂರು : ಹಲವು ದಿನಗಳಿಂದ ಜಿಲ್ಲೆಯಲ್ಲಿ ಎಡೆಬಿಡದೆ ಸುರಿದ ಮಳೆಗೆ ದನದ ಕೊಟ್ಟಿಗೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ತಾಲೂಕಿನ ಕಂಬಿಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ವನಜಾ (48) ಮೃತಪಟ್ಟ ಮಹಿಳೆ.
ತೀವ್ರ ಮಳೆಗೆ ಗೋಡೆ ಶಿಥಿಲಗೊಂಡಿತ್ತು. ನಿನ್ನೆ ಸಂಜೆ ವನಜಾ ಅವರು ಕೊಟ್ಟಿಗೆಯಲ್ಲಿ ಹಸು ಕಟ್ಟಿಹಾಕುವಾಗ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv