ಅ.15,16 ರಂದು 14 ನೇ ಅಂತರ್ ಮಹಿಳಾ ಅಥ್ಲೆಟಿಕ್ ಕ್ರೀಡಾಕೂಟ

ಧಾರವಾಡ: ವಿವಿಧ ಮಹಿಳಾ ಮಹಾವಿದ್ಯಾಲಯಗಳ ಸಹಯೋಗದಲ್ಲಿ 14 ನೇ ಅಂತರ್ ಮಹಿಳಾ ಅಥ್ಲೆಟಿಕ್ ಕ್ರೀಡಾಕೂಟವನ್ನು ಇದೇ ಅ.15,16 ರಂದು ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಅಧ್ಯಕ್ಷೆ ಡಾ.ನಿರ್ಮಲಾ.ಎಂ. ಹಿರೇಗೌಡರ್​ ಹೇಳಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ, ಶ್ರೀ ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಶ್ರೀಮತಿ ಕ.ಶಿ.ಜಿಗಳೂರು ಕಲಾ ಮಹಾವಿದ್ಯಾಲಯ, ಡಾ.ಸು.ಮು.ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯಗಳು ಭಾಗಿಯಾಗಲಿವೆ ಎಂದರು.
ಅ.15 ರಂದು ಬೆಳಿಗ್ಗೆ 10-30 ಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಅತಿಥಿಗಳಾಗಿ ಶಾಸಕ ಅರವಿಂದ ಬೆಲ್ಲದ, ಕವಿವಿ ಕುಲಪತಿ ಪ್ರೋ.ಪ್ರಮೋದ ಗಾಯಿ ಆಗಮಿಸಲಿದ್ದಾರೆ‌. ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಗೌರವ ಕಾರ್ಯದರ್ಶಿ ಎಂ.ಸಿ.ಬಂಡಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅಧ್ಯಕ್ಷತೆ ವಹಿಸಲಿದ್ದು, ಇದೇ ವೇಳೆ ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ರೇಣುಕಾ ಗೋಗೇರಿ ಅವರನ್ನು ಸನ್ಮಾನಿಸಲಾಗುವುದು ಎಂದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv