ಎರಡು ಬೈಕ್​ಗಳು ಮುಖಾಮುಖಿ: ಯುವಕ ಸಾವು

ಮಂಗಳೂರು: ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಮಹಾವೀರ ಕಾಲೇಜು ಬಳಿ ಸಂಭವಿಸಿದೆ. ಬೆಳ್ತಂಗಡಿ ಸಮೀಪದ ನೈನಾಡಿನ ನಿವಾಸಿ ಪ್ರವೀಣ್ (27) ಮೃತ ಯುವಕ. ಮಂಗಳೂರಿನಿಂದ ಮೂಡಬಿದ್ರೆಯಿಂದ ವೇಣೂರಿಗೆ ಹೊರಟಿದ್ದ ಬೈಕ್​ಗೆ ಬೆಳ್ತಂಗಡಿಯಿಂದ ಮೂಡಬಿದ್ರೆಗೆ ಹೊರಟಿದ್ದ ಬೈಕ್​ ಡಿಕ್ಕಿಯಾದ ಪರಿಣಾಮ ದರ್ಘಟನೆ ಸಂಭವಿಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv