ಕ್ಯಾಂಟರ್​ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರ ದುರ್ಮರಣ

ಬೆಂಗಳೂರು: ಕ್ಯಾಂಟರ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪದ ತಾಳೆಕೆರೆ ಕ್ರಾಸ್ ಬಳಿ ನಡೆದಿದೆ. ಕೊರಟಗೆರೆ ತಾಲೂಕಿನ ಎತ್ತಗಾನಹಳ್ಳಿ ನಿವಾಸಿ ಅರುಣ್ ಕುಮಾರ್​​(32) ಹಾಗೂ ಮಧುಗಿರಿಯ ಹರೀಶ್ ಬಾಬು(31) ಮೃತ ದುರ್ದೈವಿಗಳು.

ಮೃತರು ಕೊರಟಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ ತುಮಕೂರು ರಸ್ತೆಯಲ್ಲಿನ ತಾಳೆಕೆರೆ ಕ್ರಾಸ್​​ ಬಳಿ ಕ್ಯಾಂಟರ್ ವಾಹನದ ಚಾಲಕ ಯಾವುದೇ ಸೂಚನೆ ನೀಡದೇ ಏಕಾಏಕಿ ಬ್ರೇಕ್ ಹೊಡೆದಿದ್ದಾನೆ. ಈ ವೇಳೆ ವೇಗವಾಗಿ ಬರುತ್ತಿದ್ದ ಬೈಕ್​ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: firstnews.tv