ಕೊಂಡ ಹಾಯುವಾಗ ಬಿದ್ದು ಇಬ್ಬರಿಗೆ ಗಾಯ

ಹೊನ್ನಾಳಿ: ದಸರಾ ಹಬ್ಬದ ಪ್ರಯುಕ್ತ ಕೆಂಡ ಹಾಯುವಾಗ ಕೊಂಡದಲ್ಲಿ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊನ್ನಾಳಿ ತಾಲೂಕಿನ ಮಲೇಕುಂಬಳೂರು ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ.
ದಸರಾ ಹಬ್ಬದ ಪ್ರಯುಕ್ತ ಆಂಜನೇಯ ದೇವಸ್ಥಾನದ ಮುಂಭಾಗ ಕೊಂಡ ಹಾಯುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವೆಂಕಟೇಶ ಹಾಗೂ ಪರಶುರಾಮ ಎಂಬುವವರು ಕೊಂಡ ಹಾಯುತ್ತಿದ್ದಾಗ ಕೆಂಡದಲ್ಲಿ‌ ಬಿದ್ದಿದ್ದಾರೆ. ಇದರಿಂದ ಅವರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಯ ಬರ್ನ್ಸ್ ವಾರ್ಡ್​ನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv