ಸಿಸಿಟಿವಿಯಲ್ಲಿ ಸೆರೆಯಾಯ್ತು 250ರೂ ಕದ್ದ ಕಳ್ಳನ ಕರಾಮತ್ತು

ಕೊಡಗು: ಕಾಲೇಜಿಗೆ ಬಂದ ಕಳ್ಳನೊಬ್ಬ ಕೈಗೆ ಏನು ಸಿಗದೇ 250 ರೂಪಾಯಿ ಕದ್ದು ಪರಾರಿಯಾಗಿದ್ದಾನೆ. ಕೊಡಗು ಜಿಲ್ಲೆ ಸೋಮವಾರ ಪೇಟೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿಗೆ ನುಗ್ಗಿದ್ದ ಕಳ್ಳ. ಕಾಲೇಜಿನ ಪ್ರಾಂಶುಪಾಲರ ಕೊಠಡಿ ಬೀಗ ಒಡೆದು ಒಳಕ್ಕೆ ಎಂಟ್ರಿ ಕೊಟ್ಟಿದ್ದ. ಕೊನೆಗೆ ಏನು ಸಿಗದೇ ಸಿಕ್ಕಿದ್ದ ಹಣವನ್ನ ತೆಗೆದುಕೊಂಡು ಹೋಗಿದ್ದಾನೆ. ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv