ಇಂದು ದ್ವಿತೀಯ ಪಿಯುಸಿ ರಿಸಲ್ಟ್

ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಗೆ ಪಿಯು ಮಂಡಳಿಯಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ವೆಬ್​ಸೈಟ್‍ನಲ್ಲಿ ಫಲಿತಾಂಶ ಹೊರಬೀಳಲಿದೆ. ಮಾರ್ಚ್ 1ರಿಂದ ಮಾರ್ಚ್ 17ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಒಟ್ಟು 6.50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸದ್ಯ ಫಲಿತಾಂಶಕ್ಕೆ ಪಿಯುಸಿ ಬೋರ್ಡ್ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಮಧ್ಯಾಹ್ನ 12 ಗಂಟೆಗೆ ವೆಬ್​ಸೈಟ್‍ನಲ್ಲಿ ಫಲಿತಾಂಶ ಹೊರ ಬೀಳಲಿದೆ. karresults.nic.in, kseeb.kar.nic.in ಹಾಗೂ pue.kar.nic.in ವೆಬ್​ಸೈಟ್​ಗಳ ಮೂಲಕ ಆನ್​ಲೈನ್​ನಲ್ಲಿ ರಿಸಲ್ಟ್ ನೋಡಬಹುದಾಗಿದೆ.

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv