‘ಕುರುಕ್ಷೇತ್ರ’ ಚಿತ್ರದ ನಾಲ್ಕು ಭಾಷೆಗಳ ಪೋಸ್ಟರ್​ ರಿಲೀಸ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕುರುಕ್ಷೇತ್ರ’ ಸಿನಿಮಾ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಲೋಕಸಭಾ ಚುನಾವಣೆ ಇದ್ದುದ್ದರಿಂದ ‘ಕುರುಕ್ಷೇತ್ರ’ ಸಿನಿಮಾದ ಯಾವುದೇ ಅಪ್​ಡೇಟ್ಸ್​ ಅಭಿಮಾನಿಗಳಿಗೆ ಸಿಕ್ಕಿರಲಿಲ್ಲ. ಆದ್ರೀಗ ‘ಕುರುಕ್ಷೇತ್ರ’ ಇಷ್ಟರಲ್ಲೇ ಥಿಯೇಟರ್​ಗೆ ದಾಳಿಯಿಡುವ ಸೂಚನೆ ಕೊಟ್ಟಿದೆ. ಯಾಕೆಂದ್ರೆ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾದ ಪೋಸ್ಟರ್ಸ್​ ರಿಲೀಸ್ ಆಗಿದ್ದು, ಅಭಿಮಾನಿಗಳ ಕುತೂಹಲ ಕೆರಳಿಸುತ್ತಿದೆ.

ಚಿತ್ರೀಕರಣ ಪೂರ್ಣಗೊಳಿಸಿರುವ ಕುರುಕ್ಷೇತ್ರ ಚಿತ್ರತಂಡ, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಈಗಾಗಲೇ ವಿಎಫ್​ಎಕ್ಸ್ ವರ್ಕ್​ ಬಹುತೇಕ ಕಂಪ್ಲೀಟ್ ಆಗಿದ್ದು, ಇಷ್ಟರಲ್ಲೇ ಚಿತ್ರತಂಡ ಆಡಿಯೋ ಬಿಡುಗಡೆ ಮಾಡಲಿದೆ. ಅಲ್ಲದೇ ರಿಲೀಸ್ ದಿನಾಂಕವನ್ನು ರಿವೀಲ್ ಮಾಡಲಿದೆ. ಪೌರಾಣಿಕ ಸಿನಿಮಾ ಕುರುಕ್ಷೇತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಬಹುತಾರಾಗಣವುಳ್ಳ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ನೂರಾರು ಕಲಾವಿದರು ನಟಿಸಿದ್ದಾರೆ. ಕನ್ನಡ ಸಿನಿಪ್ರಿಯರು ಬಹುದಿನಗಳಿಂದ ಕಾಯ್ತಿದ್ದ ಕುರುಕ್ಷೇತ್ರ ಆದಷ್ಟು ಬೇಗ ಬೆಳ್ಳಿತೆರೆ ಮೇಲೆ ಮೂಡಿಬರಲಿದೆ.

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv