ಪುಲ್ವಾಮಾದಲ್ಲಿ ಉಗ್ರರ ಗುಂಡಿಗೆ ಮತ್ತೆ ನಾಲ್ವರು ಯೋಧರು ಹುತಾತ್ಮ

ಪುಲ್ವಾಮಾ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೆ ಉಗ್ರರ ಗುಂಡಿಗೆ ಯೋಧರು ಬಲಿಯಾಗಿದ್ದಾರೆ. ಇಲ್ಲಿನ ಪಿಂಗ್ಲನ್​​ ಪ್ರದೇಶದಲ್ಲಿ ಎರಡರಿಂದ ಮೂರು ಉಗ್ರರು ಅಡಗಿದ್ದಾರೆಂಬ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಭದ್ರತಾ ಪಡೆ ಮಧ್ಯರಾತ್ರಿ ಶೋಧ ಕಾರ್ಯ ನಡೆಸಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ಮೇಜರ್​​ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಓರ್ವ ನಾಗರೀಕ ಕೂಡ ಗಾಯಗೊಂಡಿದ್ದಾರೆ. ಸದ್ಯ ಗುಂಡಿನ ಚಕಮಕಿ ನಿಂತಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವಾರವಷ್ಟೇ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ 44 ಸಿಆರ್​ಪಿಎಫ್​​ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.