ಆರು ಬೋಗಿಗಳ ನಮ್ಮ ಮೆಟ್ರೋದಲ್ಲಿ ತಾಂತ್ರಿಕ ತೊಂದರೆ!

ಬೆಂಗಳೂರು: ನಮ್ಮ ಮೆಟ್ರೋದ ಆರು ಬೋಗಿಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಇಂದು ಬೆಳಗ್ಗೆ ಆರು ಬೋಗಿಯ ಸಂಚಾರದಲ್ಲಿ ತಾಂತ್ರಿಕ ತೊಂದರೆ ಕಂಡುಬಂದಿದ್ದು, ಈ ಬಗ್ಗೆ ನಮ್ಮ ಮೆಟ್ರೋ ಸಾರ್ವಜನಿಕ ಸಂಪರ್ಕ ಅಧಿಕಾರಿ ಟ್ವೀಟ್ ಮಾಡಿದ್ದಾರೆ. ಸಂಜೆ ವೇಳೆಗೆ ಸರಿ ಪಡಿಸುವುದಾಗಿ ಟ್ವೀಟ್​ನಲ್ಲಿ ಹೇಳಿದ್ದಾರೆ.
ಇನ್ನು ಬೆಳಗ್ಗೆ ಹಾಗೂ ಸಂಜೆ, ಸಾರ್ವಜನಿಕ ದಟ್ಟಣೆ ಸಮಯದಲ್ಲಿ ಮಾತ್ರ ಆರು ಬೋಗಿಗಳು ಸಂಚಾರ ಮಾಡುತ್ತವೆ. ಇತ್ತೀಚಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಆರು ಬೋಗಿಯ ಮೆಟ್ರೋಗೆ ಚಾಲನೆ ನೀಡಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv