8 ಲಕ್ಷ ರೂಪಾಯಿ ಸಾಲ, ರೈತ ಆತ್ಮಹತ್ಯೆ

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲೂಕಿನ ಕೊಡದೂರು ಗ್ರಾಮದಲ್ಲಿ ನಡೆದಿದೆ. ರೈತ ಅಮೃತರಾವ್ (45) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅಮೃತರಾವ್ ಬ್ಯಾಂಕ್ ಹಾಗೂ ಕೈಸಾಲ ಸೇರಿ ಸುಮಾರು 8 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಆಗದೇ ಗ್ರಾಮದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv