ಬಿಸಿ ಊಟ ಸೇವಿಸಿ 80 ವಿದ್ಯಾರ್ಥಿಗಳು ಅಸ್ವಸ್ಥ..!

ತುಮಕೂರು: ಮಧ್ಯಾಹ್ನದ ಬಿಸಿ ಊಟ ಸೇವಿಸಿ 80ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಯಾಲೆ ಹಳ್ಳಿಯಲ್ಲಿ ನಡೆದಿದೆ. 1ನೇ ತರಗತಿಯಿಂದ 7 ನೇ ತರಗತಿಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ್ದರು. ಊಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಅಸ್ವಸ್ಥಗೊಂಡಿದ್ದಾರೆ. ವಾಂತಿ, ಭೇದಿ ಮತ್ತು ಹೊಟ್ಟೆ ನೋವಿನಿಂದ ತೀವ್ರ ಬಳಲುತ್ತಿದ್ದ ಮಕ್ಕಳನ್ನ ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, 80 ಮುಂದಿ ವಿದ್ಯಾರ್ಥಿಗಳಲ್ಲಿ 10 ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪೋಷಕರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ಅಲ್ಲದೇ ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರ ತಿಳಿದು ಬಿಇಒ ಆಸ್ಪತ್ರೆಗೆ ದೌಡಾಯಿಸಿ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಅಲ್ಲದೇ ತಪ್ಪಿತಸ್ಥ ಶಾಲಾ ಆಡಳಿತ ಮಂಡಳಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv