ಕಂಬದಲ್ಲಿ ವಿದ್ಯುತ್​ ಪ್ರವಹಿಸಿ, ಕುರಿಗಾಹಿ ಯುವಕನ ಸಾವು

ರಾಯಚೂರು: ವಿದ್ಯುತ್ ಶಾಕ್​ ಹೊಡೆದು ಕುರಿಗಾಹಿಯೊಬ್ಬ ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ಕಡಬೂರು ನಿವಾಸಿ ಬಸವರಾಜು (19) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಕುರಿ ಮೇಯಿಸಿಕೊಂಡು ಮನೆಗೆ ಹೊಡೆದುಕೊಂಡು ಹೋಗುವಾಗ ವಿದ್ಯುತ್ ಕಂಬದಲ್ಲಿ ಕರೆಂಟ್ ಪ್ರವಹಿಸಿ, ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ನಡೆದಿರುವುದಾಗಿ ತಿಳಿದುಬಂದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv