ತಲ್ವಾರ್‌ನಿಂದ ಕೇಕ್‌ ಕತ್ತರಿಸಿದ್ದಕ್ಕೆ ಅರೆಸ್ಟ್‌!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ತಲ್ವಾರ್​ನಿಂದ ಕೇಕ್​​ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನನ್ನು ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ.

ಅತಿರೇಕವಾಗಿ ವರ್ತಿಸಿದ್ದಕ್ಕೆ ಹುಬ್ಬಳ್ಳಿಯ ಸೆಟ್ಲ್​ಮೆಂಟ್​ ಬಡಾವಣೆ​ ನಿವಾಸಿ ಶಂಭು ಬಿಜವಾಡನನ್ನು ಪೊಲೀಸರು ಬಂಧಿಸಿದ್ದಾರೆ. ​ಶಂಭು ಬಿಜವಾಡ ತನ್ನ ಹುಟ್ಟುಹಬ್ಬದಂದು ತಲ್ವಾರ್​​ ಮೂಲಕ ಕೇಕ್​ ಕತ್ತರಿಸಿ ಸಂಭ್ರಮಿಸಿದ್ದ. ಅಲ್ಲದೇ, ಆ ವಿಡಿಯೋವನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ. ಈ ವಿಡಿಯೋ ವೈರಲ್ ಆಗ್ತಿದ್ದಂತೆ ಯುವಕನ ಮೇಲೆ ಕ್ರಮಕೈಗೊಳ್ಳುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎಮ್​.ಎನ್​.ನಾಗರಾಜ್​ ಪೊಲೀಸರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಶಂಭು ಬಿಜವಾಡನನ್ನು ಬಂಧಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv