ಉಚಿತ ಬಸ್​ಪಾಸ್​ ಯೋಜನೆ ಕೈಬಿಟ್ಟಿದ್ದಕ್ಕೆ ಎಬಿವಿಪಿ ಪ್ರತಿಭಟನೆ

ಹುಬ್ಬಳ್ಳಿ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಬಜೆಟ್‌ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ಕೊಡುವ ಘೋಷಣೆ ಮಾಡದೇ ಇರುವುದನ್ನು ಖಂಡಿಸಿ ನಗರದಲ್ಲಿಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಹೊಸುರ ವೃತದಿಂದ ತಹಶೀಲ್ದಾರ್​ ಕಚೇರಿವರೆಗೆ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ ನೂರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಸಿಎಂ ಮಂಡಿಸಿರುವ ಬಜೆಟ್​​ನಲ್ಲಿ ವಿದ್ಯಾರ್ಥಿಗಳ ಉಚಿತ ಬಸ್​ಪಾಸ್ ಯೋಜನೆ ಜಾರಿಯಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಅದು ಇಂದು ಹುಸಿಯಾಗಿದೆ. ಅಲ್ಲದೇ, ಸಿಎಂ ಕುಮಾರಸ್ವಾಮಿಯವರು ಕೂಡಲೇ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

 ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂರ್ಪಕಿಸಿ: contact@firstnews.tv