ರಾಜ್ಯದ 3 ಕಡೆ ಎಸಿಬಿ ದಾಳಿ, 4 ಅಧಿಕಾರಿಗಳ ಬಂಧನ

ಬೆಂಗಳೂರು: ರಾಜ್ಯದ ತುಮಕೂರು, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಿದನಕೆರೆಯ ಗ್ರಾಮ ಲೆಕ್ಕಾಧಿಕಾರಿ ಶಿವಪ್ರಕಾಶ್ ₹ 4000 ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದಿದ್ದಾನೆ.

ಗದಗ ಜಿಲ್ಲೆಯ ಖಾದಿ ಮತ್ತು ಗ್ರಾಮೋದ್ಯೋಗದ ಅಧಿಕಾರಿ ನರಿಯಪ್ಪ ಎಂಬುವವರು ₹ 10 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಹಾಗೂ ಕೃಷ್ಣಮೂರ್ತಿ ಎಂಬುವವರು ₹ 10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದಿದ್ದಾರೆ.

ಈ ನಾಲ್ವರ ಮೇಲೆ ನೊಂದವರಿಂದ ದೂರು ಬಂದ ಹಿನ್ನೆಲೆಯಲ್ಲಿ ಆಯಾ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆ ನೆಡೆಸಿದ್ದಾರೆ. ಈ ನಾಲ್ವರ ವಿರುದ್ಧ ತನಿಖೆ ಮುಂದುವರೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv