ಎಕ್ಸಿಕ್ಯೂಟಿವ್ ಇಂಜಿನಿಯರ್​​ಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್​..!

ಕಲಬುರಗಿ: ಬೆಳ್ಳಂಬೆಳಗ್ಗೆ ಕರ್ನಾಟಕ ಭೂ ಸೇನಾ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್​​ಗೆ ಎಸಿಬಿ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ಕರ್ನಾಟಕ ಭೂ ಸೇನಾ ನಿಗಮದ ಎಕ್ಸಿಕ್ಯುಟಿವ್ ಇಂಜಿನಿಯರ್ ವೀರಭದ್ರಪ್ಪ ಎಂಬುವವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಓಕಳಿ‌ ಕ್ಯಾಂಪ್​ನ ಎನ್​ಜಿಒ ಕಾಲೋನಿಯಲ್ಲಿರುವ ವೀರಭದ್ರಪ್ಪ ಮನೆಯಲ್ಲಿ ಎಸಿಬಿ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಡಿವೈಎಸ್ಪಿ ಜೇಮ್ಸ್, ಸಿಪಿಐ ಕಲ್ಲೇದವರ್​ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇಂಜನಿಯರ್ ವೀರಭದ್ರಪ್ಪ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv