ಲಂಚಬಾಕ ಎಫ್​ಡಿಎ ಅಧಿಕಾರಿ ಎಸಿಬಿ ಬಲೆಗೆ

ಕಲಬುರ್ಗಿ: ಮಿಂಚಿನ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಲಂಚಬಾಕ ಎಫ್​ಡಿಎ ನೌಕರನನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ಪತ್ರಾಂಕಿತ ಉಪ ಖಜಾನೆ ಕಚೇರಿಯ ಎಫ್​ಡಿಎ ಅಧಿಕಾರಿ ಲಾಲಪ್ಪಾ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸೇಡಂ ತಾಲೂಕಿನ ಮುದೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ದ್ವಿತೀಯ ದರ್ಜೆ ಗುಮಾಸ್ತ ವಿನಯ್ ಕುಮಾರ್ ಎಂಬವರಿಂದ ಕಚೇರಿ ಬಿಲ್ ಪಾವತಿಸಲು 11,000 ಲಂಚದ ಬೇಡಿಕೆ ಇಟ್ಟಿದ್ದರು. ಈ ವೇಳೆ ಎಸಿಬಿ ಡಿವೈಎಸ್ಪಿ ಜೇಮ್ಸ್ ಮಿನೇಜಸ್ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಆರೋಪಿಯನ್ನು ರೆಡ್​ಹ್ಯಾಂಡ್​ ಆಗಿ ಖೆಡ್ಡಾಕೆ ಬೀಳಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv