ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: ವಲಯ ಅರಣ್ಯಾಧಿಕಾರಿ ನಿವಾಸದ ಮೇಲೆ ದಾಳಿ..!

ಹುಬ್ಬಳ್ಳಿ: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಾಳಿ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮೃತ್ಯುಂಜಯ ನಗರದಲ್ಲಿರುವ ವಲಯ ಅರಣ್ಯಾಧಿಕಾರಿ ಸಿ.ಹೆಚ್​​. ಮಾವಿನತೋಪು ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಎಸಿಬಿ ಡಿವೈಎಸ್​​ಪಿ ವಿಜಯಕುಮಾರ್​​ ಬಿಸನಳ್ಳಿ ನೇತೃತ್ವದಲ್ಲಿ ಕಾರ್ಯಾಚರಣೆ ನಡಯುತ್ತಿದೆ. ಅಕ್ರಮ ಸಂಪಾದನೆ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ಮಾವಿನತೋಪು ಅವರ ಮನೆ ಸೇರಿದಂತೆ ಧಾರವಾಡ ಕಚೇರಿ ಮೇಲೂ ದಾಳಿ ಮಾಡಿದ್ದಾರೆ. ಅಪಾರ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂರ್ಪಕಿಸಿ:contact@firstnews.tv