ಲಂಚಬಾಕ ಜೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ

ರಾಯಚೂರು: ಖಾಸಗಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚ ಪಡೆಯುತಿದ್ದ ಜೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರದ ಖಾಸಗಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗುತ್ತಿಗೆದಾರ ಬಸವರಾಜ್ ಎಂಬುವವರಿಂದ 25 ಸಾವಿರ ರೂಪಾಯಿ ಲಂಚ ಕೇಳಿದ್ದರು. ಬಳ್ಳಾರಿ ಎಸಿಬಿ ಡಿವೈಎಸ್​ಪಿ ಅರುಣ್​ ಕುಮಾರ್​ ಹಾಗೂ ರಾಯಚೂರು ‌ಇನ್ಸ್​ಫೆಕ್ಟರ್ ಶ್ರೀಧರ್​ದೊಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿ ಲಂಚ ಪಡೆಯುವ ವೇಳೆ ರೆಡ್​ಹ್ಯಾಂಡ್​ ಆಗಿ ಆರೋಪಿಯನ್ನು ಹಿಡಿದಿದ್ದಾರೆ.

ನಿಮ್ಮ ಸಲಹೆ,ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv