ಲಾರಿಗೆ ಕಾರು ಡಿಕ್ಕಿ: ಮಹಿಳೆ ಸಾವು

ಕೊಡಗು: ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಮಂಗಳೂರು-ಮೈಸೂರು ಹೆದ್ದಾರಿಯ ಆನೆಕಾಡು ಬಳಿ ನಡೆದಿದೆ.

ಮಡಿಕೇರಿ ಬಳಿಯ ತಾಳತ್ತಮನೆ ನಿವಾಸಿ ಫಿಲೋಮಿನಾ (55 ) ಮೃತ ದುರ್ದೈವಿ. ಕುಟುಂಬಸ್ಥರೊಂದಿಗೆ ಕಾರಿನಲ್ಲಿ ಕೆ.ಆರ್.ನಗರದ ಡೋರ್ನಳ್ಳಿ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪುತ್ರ ರಾಬಿನ್ ಕಾರು ಚಲಾಯಿಸುತ್ತಿರಬೇಕಾದ್ರೆ, ಲಾರಿಗೆ ಕಾರು ಡಿಕ್ಕಿ ಹೊಡೆದು ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಫಿಲೋಮಿನಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv