ಆಕಸ್ಮಿಕ ಬೆಂಕಿ ತಗುಲಿ 6 ಅಂಗಡಿಗಳು ಭಸ್ಮ..!

ಚಿತ್ರದುರ್ಗ: ಆಕಸ್ಮಿಕ ಬೆಂಕಿ ಅವಗಡ ಸಂಭವಿಸಿದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿನ 6 ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಪರಶುರಾಮ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯ ಜ್ವಾಲೆಗೆ ಬೀದಿ ಬದಿಯ ಟೀ ಸ್ಟಾಲ್, ಟೈಲರ್ ಶಾಪ್, ಜೆರಾಕ್ಸ್ ಅಂಗಡಿ ಸೇರಿ 6 ಅಂಗಡಿಯೊಳಗಿದ್ದ ವಸ್ತುಗಳು ಬೆಂಕಿಯಲ್ಲಿ ಭಸ್ಮವಾಗಿವೆ. ಅವಗಡದಿಂದ ಸುಮಾರು 10 ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಚಳ್ಳಕೆರೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತು ಪರಶುರಾಂಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂರ್ಪಕಿಸಿ: contact@firstnews.tv