ಕಾರ್, ಲಾರಿ, ಖಾಸಗಿ ಬಸ್ ಮಧ್ಯೆ ಸರಣಿ ಅಪಘಾತ: ಓರ್ವ ಸಾವು

ಚಿತ್ರದುರ್ಗ: ಇನ್ನೋವಾ ಕಾರ್, ಖಾಸಗಿ ಬಸ್ ಹಾಗೂ ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿ ಲಾರಿ‌ ಚಾಲಕ ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಸಮೀಪದ ಬೀದರ್- ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ 8ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಸದ್ಯಕ್ಕೆ ಮೃತ ಲಾರಿ ಚಾಲಕನ ಗುರುತು ಪತ್ತೆಯಾಗಿಲ್ಲ. ಬೆಂಗಳೂರಿನಿಂದ ರಾಯಚೂರಿಗೆ ಖಾಸಗಿ ಬಸ್ ತೆರಳುತಿದ್ದ ವೇಳೆ ಸರಣಿ ಅಪಘಾತ ನಡೆದಿದೆ. ಗಾಯಾಳುಗಳನ್ನು ಹಿರಿಯೂರು ಹಾಗೂ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv