ಭೀಕರ ರಸ್ತೆ ಅಪಘಾತ, ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ನಲ್ಲಗುಟ್ಟಪಾಳ್ಯದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್​ಆರ್​ಟಿಸಿ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ 5 ಜನರಿಗೆ ಗಂಭೀರ ಗಾಯಗಳಾಗಿದೆ. ಮೃತರು ಜಂಗಮಾರಪನಹಳ್ಳಿ ಗ್ರಾಮದ ಶ್ರೀನಿವಾಸ್ ಹಾಗೂ ವೆಂಕಟೇಶಪ್ಪ ಎಂದು ಗುರುತಿಸಲಾಗಿದೆ.

ನಾಸ್ತಿಮನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಎದುರಿಗೆ ಬಂದ ಕ್ರೂಸರ್​​ಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಕೆಎಸ್‍ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್ ಆಗಿದ್ದರಿಂದ ಘಟನೆ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್​​ ಕೆಎಸ್​ಆರ್​​ಟಿಸಿ ಬಸ್​ ಒಳಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದೆ. ಕ್ರೂಸರ್​ನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸ್ಥಳಕ್ಕೆ ಬಂದಿರುವ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *