ಆಕಸ್ಮಿಕ ಬೆಂಕಿ: 3 ಗುಡಿಸಲುಗಳು ಸುಟ್ಟು ಭಸ್ಮ

ತುಮಕೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ 3 ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ಗುಬ್ಬಿ ತಾಲೂಕಿನ ಕೋಡಿ ಬಸವೇಶ್ವರ ದೇವಸ್ಥಾನದ ಬಳಿ ತಡರಾತ್ರಿ ನಡೆದಿದೆ.
ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಗುಡಿಸಲಿನಲ್ಲಿದ್ದವರು ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಗೆ ಆಹುತಿಯಾದ ಕುಟುಂಬಗಳು ಚಾಪೆ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದೆ. ಈ ಘಟನೆಯಲ್ಲಿ ಸುಮಾರು ₹2 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ವಿದ್ಯುತ್​​ ಶಾರ್ಟ್​ ಸರ್ಕ್ಯೂಟ್​​ನಿಂದ ಗುಡಿಸಲಿಗೆ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತು ಗುಬ್ಬಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv