ವಿದ್ಯುತ್​ ತಂತಿ ತಗುಲಿ ಹುಲ್ಲಿನ ಬಣವೆ ಭಸ್ಮ

ಕಲಬುರ್ಗಿ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೇವಿನ ಬಣವೆ ಸುಟ್ಟು ಬೂದಿಯಾದ ಘಟನೆ ಕಾಳಗಿ ತಾಲೂಕಿನ ಕೋಡ್ಲಿ ತಾಂಡಾದಲ್ಲಿ ನಡೆದಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.