ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, 12 ಜಾನುವಾರು ಸಜೀವ ದಹನ

ಕಲಘಟಗಿ: ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಕೊಟ್ಟಿಗೆಯಲ್ಲಿ ಕಟ್ಟಿದ್ದ 12 ಜಾನುವಾರುಗಳ ಸಜೀವ ದಹನವಾದ ಘಟನೆ ತಾಲೂಕಿನಲ್ಲಿ ನಡೆದಿದೆ. ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
ಅಡಿವಯ್ಯ ಹಿರೇಮಠ್ ಅವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆಕಸ್ಮಿಕ ಬೆಂಕಿಗೆ ರೈತ ಅಡಿವಯ್ಯರ ಜೀವನಾಧಾರವಾಗಿದ್ದ 12 ಹಸುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಕೊಟ್ಟಿಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv