ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡ್ತಿದ್ದವ ಅರೆಸ್ಟ್

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೇಶ್ವಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಗದಗ ರೋಡ್ ಜೋಪಡಿಪಟ್ಟಿ ನಿವಾಸಿಯಾದ ರಾಘವೇಂದ್ರ ಅಂಬಿಗೇರ ಬಂಧಿತ ಆರೋಪಿ. ಆರೋಪಿಯಿಂದ ₹ 2 ಸಾವಿರ ಮೌಲ್ಯದ 205 ಗ್ರಾಂ ತೂಕದ ಗಾಂಜಾ ಹಾಗೂ ಒಂದು ಸಾವಿರ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ರಾಘವೇಂದ್ರ ಈ ಹಿಂದೆ ಕಳ್ಳತನ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಆತನ ಮೇಲೆ ಹುಬ್ಬಳ್ಳಿ- ಧಾರವಾಡ ಅವಳಿ ನಗರದ ವಿವಿಧ ಪೊಲೀಸ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಈ ಕುರಿತು ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv