ಚಾಲೆಂಜಿಂಗ್​ ಸ್ಟಾರ್​ ದರ್ಶನ್​​ರಿಂದ #JusticeForMadhu ಟ್ವೀಟ್​

ಬೆಂಗಳೂರು: ರಾಯಚೂರಿನಲ್ಲಿ ಎಂಜಿನಿಯರಿಂಗ್​​​ ವಿದ್ಯಾರ್ಥಿನಿ ಮಧು ಪತ್ತಾರ ಅನುಮಾನಾಸ್ಪದ ಸಾವಿಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದ್ದು, ಈಗ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಕೂಡಾ ಇದನ್ನ ಖಂಡಿಸಿ​ ಟ್ವೀಟ್​ ಮಾಡಿದ್ದಾರೆ. ‘ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುವಿನ ಅನುಮಾನಾಸ್ಪದ ಸಾವಿನ ತನಿಖೆ ಅತೀ ಶೀಘ್ರದಲ್ಲಿ ಸರಿಯಾಗಿ ನಡೆದು ಇಂಥ ಅಮಾನುಷ ಕೃತ್ಯವನ್ನು ಎಸಗಿರುವ ಕೀಚಕರಿಗೆ ಕಾನೂನು ಬದ್ಧವಾಗಿ ತಕ್ಕ ಶಾಸ್ತಿಯಾಗಬೇಕೆಂದು ಕೋರಿಕೊಳ್ಳುತ್ತಿದ್ದೇನೆ. ಈ ರೇಪ್ & ಮರ್ಡರ್ ಕೃತ್ಯಕ್ಕೆ ಇನ್ನಷ್ಟು ಕಠಿಣವಾದ ಕಾನೂನು ನಮ್ಮ ದೇಶದಲ್ಲಿ ರೂಪುಗೊಳ್ಳಬೇಕು’ ಅಂತಾ ಟ್ವೀಟ್​ ಮಾಡಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv