‘ಯುವರತ್ನ’ ಶೂಟಿಂಗ್‌ಗಾಗಿ ಹುಬ್ಬಳ್ಳಿಗೆ ಆಗಮಿಸಿದ ಪುನೀತ್

ಹುಬ್ಬಳ್ಳಿ: ಧಾರವಾಡದಲ್ಲಿ ಯುವರತ್ನ ಚಿತ್ರದ ಶೂಟಿಂಗ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆಗಮಿಸಿದ್ರು. ಈ ವೇಳೆ ಪುನೀತ್ ಅಭಿಮಾನಿ ಬಳಗದಿಂದ ಶಾಲು ಹೋದಿಸಿ ಮೈಸೂರು ಟೋಪಿ ಹಾಕಿ ಭರ್ಜರಿಯಾಗಿ ಸ್ವಾಗತಿಸಲಾಯಿತು. ಬಳಿಕ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ ಮೂಲಕ ಪುನೀತ್ ಧಾರವಾಡಕ್ಕೆ ಪ್ರಯಾಣ ಬೆಳೆಸಿದ್ರು. ನಗರದಲ್ಲಿ ಸುಮಾರು ಆರು ದಿನಗಳ ಕಾಲ ಚಿತ್ರದ ಶೂಟಿಂಗ್ ನಡೆಯಲಿದೆ. ನಗರದ ಯುನಿವರ್ಸಿಟಿ, ಕರ್ನಾಟಕ ಕಾಲೇಜು ಸೇರಿದಂತೆ ಹಲವು ಕಡೆ  ಚಿತ್ರೀಕರಣ ನಡೆಯಲಿದ್ದು, ಪುನೀತ್ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv