ದುಬೈ ಉದ್ಯಮಿಗಳೊಂದಿಗೆ ರಾಹುಲ್ ಗಾಂಧಿ ಸರಣಿ ಸಭೆ..!

ದುಬೈ: ಅರಬ್​ ರಾಷ್ಟ್ರಗಳ ಪ್ರವಾಸದಲ್ಲಿರೋ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಇಂದು ಹಲವು ಉದ್ಯಮಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಉದ್ಯಮಿಗಳೊಂದಿಗೆ ಬ್ರೇಕ್​ಫಾಸ್ಟ್ ಮಾಡಿದ ರಾಹುಲ್ ಗಾಂಧಿ, ಮುಂಬರುವ ಲೋಕಸಭಾ ಚುನಾವಣೆ ಕುರಿತು ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ರಾಹುಲ್ ಗಾಂಧಿ ಪಾಲ್ಗೊಂಡಿದ್ದ ಸಭೆಯಲ್ಲಿ ಮತ್ತೊಬ್ಬ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಕೂಡ ಪಾಲ್ಗೊಂಡಿದ್ದು ಹಲವು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.
ಈ ಬಳಿಕ ಅನಿವಾಸಿ ಭಾರತೀಯ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಲಿರುವ ರಾಹುಲ್ ಗಾಂಧಿ, ಯಾವ ವಿಷಯದ ಕುರಿತು ಮಾತನಾಡಲಿದ್ದಾರೆ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.