ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆ?

ಹುಬ್ಬಳ್ಳಿ: ನಗರದಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುವುದನ್ನು ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕನ್ನಡ ಕ್ರಾಂತಿ ದೀಪ ಸಂಘಟನೆ ರಾಜ್ಯಾದ್ಯಕ್ಷ ರವಿ ಕದಂ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹು-ಧಾ ಮಹಾನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಘಟಕಗಳನ್ನು ತೆರೆಯಲು ಕೆಲ ನಿಯಮಗಳಿವೆ. ಅವುಗಳನ್ನು ಗಾಳಿಗೆ ತೂರಿ ತಮ್ಮದೇ ಆದ ರೀತಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸದರೆ ಫೋನ್​​ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಈ ಕುರಿತಂತೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆದರೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುಲಾಗುವುದು ಅಂತಾ ರವಿ ಕದಂ ಎಚ್ಚರಿಕೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv