ಶ್ರೀಲಂಕಾ ಬಾಂಬ್ ಸ್ಫೋಟ, ಮೃತದೇಹಗಳನ್ನ ಒಮ್ಮೆಗೇ ತರಲು ಸಾಧ್ಯವಿಲ್ಲ: ಸಿಎಂ ಕುಮಾರಸ್ವಾಮಿ

ಹಾಸನ: ಶ್ರೀಲಂಕಾದಲ್ಲಿ ನಡೆದ ಭೀಕರ ಸರಣಿ ಬಾಂಬ್ ಸ್ಫೋಟಗಳ ಸಂದರ್ಭದಲ್ಲಿ ಪ್ರವಾಸಕ್ಕೆಂದು ಹೋಗಿದ್ದ ನಮ್ಮ ಪಕ್ಷದ ಶಾಸಕರು, ಮಾಜಿ ಶಾಸಕರು, ಕೆಲ ನಾಯಕರು  ಸಾವಿಗೀಡಾಗಿದ್ದಾರೆ. ಈ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಜೊತೆ  ರಾಜ್ಯ ಸರ್ಕಾರ ಸಂಪರ್ಕದಲ್ಲಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ದೇಹಗಳನ್ನ ಇಂದು ಸಂಜೆಯ ನಂತರ ರಾಜ್ಯಕ್ಕೆ ತರಿಸಲಾಗುವುದು. ಎಲ್ಲಾ ಮೃತದೇಹಗಳನ್ನು ಒಮ್ಮೆಗೇ ತರಲು ಸಾಧ್ಯವಿಲ್ಲ. ಆದರೂ ಸರ್ಕಾರದ ಕಡೆಯಿಂದ ಎಲ್ಲಾ  ದೇಹಗಳನ್ನ ತಕ್ಷಣ ತರಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv