’ಮಾನಸ ಸರೋವರ ಯಾತ್ರೆಗೆ ತೆರಳಿರೋ ಯಾತ್ರಿಕರೆಲ್ಲರೂ ಸೇಫ್’

ಹುಬ್ಬಳ್ಳಿ:ಮಾನಸ ಸರೋವರ ಯಾತ್ರೆಗೆ ತೆರಳಿದ್ದ ರಾಜ್ಯದ ಪ್ರವಾಸಿಗರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲ ರೀತಿಯ ಅಗತ್ಯ ನೆರವು ನೀಡಿವೆ ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ನೇಪಾಳದ ಸೀಮಿಕೋಟದಲ್ಲಿ ಭಾರಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಯಾತ್ರಿಕರನ್ನು ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಯಾತ್ರಿಕರು ಸಂಪರ್ಕದಲ್ಲಿದ್ದು, ಕುಟುಂಬಸ್ಥರು ಯಾವುದೇ ರೀತಿಯ ಬಯಪಡುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ನಿಮ್ಮೊಂದಿಗಿದೆ ಅಂತಾ ಅಭಯ ನೀಡಿದರು.
ಮಂಡಿಸುತ್ತಿರುವ ಬಜೆಟ್​ ಅದು ಕೇವಲ 37 ಜನರ ಬಜೆಟ್​
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡಿಸುತ್ತಿರುವ ಬಜೆಟ್​ಗೆ ಜನಮನ್ನಣೆ ಇಲ್ಲ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.‌ ಇದು ಕೇವಲ 37 ಜನರ ಬಜೆಟ್ ಆಗಿದ್ದು, ಈ ಬಜೆಟ್​ಗೆ ಯಾವುದೇ ಅರ್ಥವಿಲ್ಲ. ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ರೈತರ ಸಾಲ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಅನ್ನೋದಾದರೆ, ಕೂಡಲೇ ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇಸಬೇಕು. ಇಲ್ಲವಾದ್ರೆ, ತಾವು ಹೇಳಿದ್ದು ಬೇಜವಾಬ್ದಾರಿ ಹೇಳಿಕೆ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಸವಾಲು ಹಾಕಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv