ಉಚಿತ ಬಸ್ ​ಪಾಸ್​ಗೆ ಆಗ್ರಹಿಸಿ ಪ್ರೊಟೆಸ್ಟ್​​

ರಾಯಚೂರು: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಎಐಡಿಎಸ್ಒ, ಎಐಡಿವೈಒ ಹಾಗೂ ಎಐಎಮ್ಎಸ್​​​ಎಸ್ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಎಲ್​ವಿಡಿ ಕಾಲೇಜಿನಿಂದ ಪ್ರತಿಭಟನೆ ಆರಂಭಿಸಿದ ನೂರಾರು ವಿದ್ಯಾರ್ಥಿಗಳು ಪ್ರತಿಭಟನಾ ಱಲಿ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿ ಮುಖಂಡರು ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಬಸ್ ಪಾಸ್ ನೀಡುವ ಭರವಸೆ ನೀಡಲಾಗಿತ್ತು. ಆದ್ರೆ ಇಂದಿನ ಸಮ್ಮಿಶ್ರ ಸರ್ಕಾರ ಕೇವಲ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿವಾಗಿ ಬಸ್ ಪಾಸ್ ವಿತರಿಸಲು ಮುಂದಾಗಿದೆ. ಈ ಕ್ರಮದಿಂದಾಗಿ ಇತರೆ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡದೇ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv