ಕೋಮುವಾದಿ ಪಕ್ಷ ದೂರವಿಡಲು ಜೆಡಿಎಸ್ ಜೊತೆ ಮೈತ್ರಿ:ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಿ ಕೋಮುವಾದಿ ಪಕ್ಷ ಬಿಜೆಪಿಯನ್ನ ದೂರ ಇಡುತ್ತೇವೆ. ಕೋಮುವಾದಿ ಪಕ್ಷವನ್ನ ದೂರ ಇಡುವ ನಿಟ್ಟಿನಲ್ಲಿ ಜೆಎಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ರು.
ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ನಿರೀಕ್ಷೆಯಷ್ಟು ಫಲಿತಾಂಶ ಬಂದಿಲ್ಲ. ಬಿಜೆಪಿ ಹಿಂದುತ್ವದ ವಿಚಾರ ಇಟ್ಟುಕೊಂಡು ಜನರಿಗೆ ಸುಳ್ಳು ಹೇಳಿ ಮತ ಪಡೆದಿದೆ. ಕರಾವಳಿ ಭಾಗದಲ್ಲಿ 30 ಜನರಿಗೆ ಒಬ್ಬರಂತೆ ನೇಮಿಸಿ ಸುಳ್ಳು ಸುದ್ದಿಗಳನ್ನು ಜನರ ತಲೆಯಲ್ಲಿ ತುಂಬಿಸಿದ್ರು ಎಂದು ಆರೋಪಿಸಿದ್ರು. ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಲ್ಕು ವರ್ಷದ ಸಾಧನೆ ಶೂನ್ಯ. ಮೋದಿ ಪ್ರಧಾನಿ ಆಗಲು ಕಾಂಗ್ರೆಸ್​ನ ಕೊಡುಗೆ ಇದೆ ಎಂದರು. ನಾವು ಸ್ವಲ್ಪ ಎಚ್ಚೆತ್ತುಕೊಂಡಿದ್ರೆ ಕರಾವಳಿ ಭಾಗದಲ್ಲಿ ಇನ್ನಷ್ಟು ಸೀಟುಗಳನ್ನ ಗೆಲ್ಲಬಹುದಿತ್ತು ಎಂದು ಹೇಳುವ ಮೂಲಕ ವಿಧಾನಸಭಾ ಎಲೆಕ್ಷನ್​ನಲ್ಲಿ ಕಾಂಗ್ರೆಸ್ ಸೋಲನ್ನ ಅನುಭವಿಸಿದ್ದಕ್ಕೆ ಕಾರಣ ತಿಳಿಸಿದ್ರು. ​​

ರಾಜ್ಯ ಕಾಂಗ್ರೆಸ್ ಇತಿಹಾಸದಲ್ಲೇ ದೀರ್ಘಕಾಲ ಅಧ್ಯಕ್ಷರಾಗಿದ್ದವರು ಪರಮೇಶ್ವರ್​
ರಾಹುಲ್ ಗಾಂಧಿ ಅವರು ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನ ನೇಮಕ ಮಾಡಿದ್ದಾರೆ. ದಿನೇಶ್​ ಗೂಂಡುರಾವ್​ ಹಾಗೂ ಈಶ್ವರ್ ಖಂಡ್ರೆ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ದೀರ್ಘಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಘಟನೆ ಮಾಡಿದ ಪರಮೇಶ್ವರ್ ಅವರಿಗೆ ಧನ್ಯವಾದ. ಡಾ ಜಿ ಪರಮೇಶ್ವರ್ ಕರ್ನಾಟಕದ ಕಾಂಗ್ರೆಸ್ ಇತಿಹಾಸದಲ್ಲಿ ದೀರ್ಘಕಾಲ ಅಧ್ಯಕ್ಷರಾಗಿದ್ದವರು ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಪರಮೇಶ್ವರ್​ ತಮ್ಮ ಆಳ್ವಿಕೆಯಲ್ಲಿ, ಚುನಾವಣೆಗೆ ಗಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv