‘ಈಗಲೂ ನನಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ’

ಧಾರವಾಡ: ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ ಅಂತಾ ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಎಸ್.ಶಿವಳ್ಳಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ, ಸಚಿವ ಸ್ಥಾನ ಯಾಕೆ ಕೈತಪ್ಪಿತು ಗೊತ್ತಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕಕ್ಕೆ ಸಮಾನ ಅವಕಾಶ ನೀಡಬೇಕು ಎಂದು ಹೇಳಿದ್ರು. ಜಾತಿವಾರು, ಪ್ರಾದೇಶಿಕತೆ, ಹಿರಿತನದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು. ಈಗಲೂ ನನಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ ಅಂತಾ ಶಾಸಕ ಶಿವಳ್ಳಿ ಹೇಳಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv