ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ

ಆನೇಕಲ್: ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹೊಸೂರು ಬಳಿ ನಡೆದಿದೆ. ಆ್ಯಂಬುಲೆನ್ಸ್ ತಿರುಚ್ಚಿಯಿಂದ ಬೆಂಗಳೂರಿನತ್ತ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುಂಜಾನೆ 3:30 ಸುಮಾರಿಗೆ ಘಟನೆ ನಡೆದಿದ್ದು, ಆ್ಯಂಬುಲೆನ್ಸ್​ ಚಾಲಕ ಜೈಸೂರ್ಯ, ಸಹಾಯಕ ಮದನ್ ಕುಮಾರ್ ಸೇರಿದಂತೆ ಇಬ್ಬರು ರೋಗಿಗಳೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ 1 ಎನ್1 ಜ್ವರದಿಂದ ಬಳಲುತ್ತಿದ್ದ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿತ್ತು. ಈ ವೇಳೆ ಡಿಸೇಲ್ ಖಾಲಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ್ಯಂಬುಲೆನ್ಸ್​ನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv