ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ

ಕೋಲಾರ : ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಜಿಎಫ್​​​​ನ ಮಾರಿಕುಪ್ಪಂ ಬಡಾವಣೆಯಲ್ಲಿ ನಡೆದಿದೆ.
ಪತಿ ಧನರಾಜ್ (62), ಪತ್ನಿ ಪರಿಮಳದೇವಿ (60) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಬಿಜಿಎಂಎಲ್​ನ ನಿವೃತ್ತ ನೌಕರರಾಗಿದ್ದ ಧನರಾಜ್, ಪರಿಮಳ ದಂಪತಿಗೆ ಮಕ್ಕಳಿಲ್ಲ ಎಂಬ ಕಾರಣಕ್ಕೆ ಜೀನದಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಾರಿಕುಪ್ಪಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರಿಕುಪ್ಪಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv