ಕಾಂಗ್ರೆಸ್‌-ಜೆಡಿಎಸ್ ಸರ್ಕಾರ ದಿಕ್ಕು ತಪ್ಪಿದೆ: ಕೇಂದ್ರ ಸಚಿವ ಅನಂತ್ ಕುಮಾರ್ ಕಿಡಿ

ಬೆಂಗಳೂರು: ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳ ಚುನಾವಣೆ ಇಂದು ನಡೆಯುತ್ತಿದ್ದು, ಕೇಂದ್ರ ಸಚಿವ ಅನಂತ್‌ ಕುಮಾರ್‌ ತಮ್ಮ ಹಕ್ಕು ಚಲಾಯಿಸಿದರು. ಮತದಾನ ಮಾಡಿದ ಬಳಿಕ ಮಾತನಾಡಿ ಅವರು, ನಾನೂ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಮತ ಹಾಕಿದ್ದೇನೆ. ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ದಿಕ್ಕು ತಪ್ಪಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 25 ಸಚಿವರು ಖಾತೆ ರಹಿತರಾಗಿದ್ದಾರೆ ಎಂದರು. ಎರಡೂ ಪಕ್ಷದಲ್ಲೂ ಆಂತರಿಕ ಬಿಕ್ಕಟ್ಟು ತಲೆದೋರಿದ್ದು, ಶಾಸಕರು ಮತ್ತು ಕಾರ್ಯಕರ್ತರಿಗೆ ಸರ್ಕಾರ ರಚಿಸಿರುವುದು ಇಷ್ಟವಿಲ್ಲ. ಜೊತೆಗೆ ಜನರಿಗೂ ಇಷ್ಟವಿಲ್ಲ ಎಂದು ಹೇಳಿದರು.