ಬೇಡಿಕೆ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್​

ರಾಯಚೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ. ನಗರದ ಟಿಪ್ಪು ಸುಲ್ತಾನ್ ಉದ್ಯಾನವದಲ್ಲಿ ಸೇರಿಸ ಸುಮಾರು 60 ಕ್ಕೂ ಹೆಚ್ಚು ಕಾರ್ಯಕರ್ತೆಯರು, ಖಾಯಂ ನೌಕರಿ, 18 ಸಾವಿರ ಕನಿಷ್ಠ ವೇತನ, ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ನಡೆಸಿದರು. ಅಲ್ಲದೇ ಸರ್ಕಾರ ಬೇಡಿಕೆ ಈಡೇರಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.com