ಅಂಗನವಾಡಿ ಕೇಂದ್ರ ಖಾಸಗೀಕರಣ, ಕಾರ್ಯಕರ್ತೆಯರಿಂದ ಪ್ರತಿಭಟನೆ..!

ರಾಯಚೂರು: ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣಕ್ಕೆ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲೆಯ 500ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ಖಾಸಗೀಕರಣ, ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ನಗರದ ಸಾರ್ವಜನಿಕ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದ ಕಾರ್ಯಕರ್ತೆಯರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv