ಇಂದು ಅನಿತಾ ಕುಮಾರಸ್ವಾಮಿ ಪ್ರಮಾಣ ವಚನ

ಬೆಂಗಳೂರು: ರಾಮನಗರ ನೂತನ ಶಾಸಕಿ ಅನಿತಾ ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಸ್ಪೀಕರ್​ ಕಚೇರಿಯಲ್ಲಿ ರಮೇಶ್​ ಕುಮಾರ್,​ ಅನಿತಾ ಕುಮಾರಸ್ವಾಮಿ ಅವರಿಗೆ ಪ್ರಮಾಣ ವನಚ ಬೋಧಿಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್​ ನಾಯಕರು ಉಪಸ್ಥಿತರಿರಲಿದ್ದಾರೆ. ಇತ್ತೀಚೆಗೆ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅನಿತಾ ಕುಮಾರಸ್ವಾಮಿ ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv