ಅನಿತಾ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಉಪ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಗೆಲುವು ಸಾಧಿಸಿದ ಅನಿತಾ ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಮಧ್ಯಾಹ್ನ 3.23 ನಿಮಿಷಕ್ಕೆ ಅನಿತಾ ಕುಮಾರಸ್ವಾಮಿಯವರು ಭಗವಂತ ಹಾಗೂ ಸತ್ಯನಿಷ್ಠೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸಭಾಧ್ಯಕ್ಷ ರಮೇಶ್ ಕುಮಾರ್ ಪ್ರಮಾಣವಚನ ಬೋಧಿಸಿದರು. ಈ ವೇಳೆ, ಸಚಿವ ಡಿ.ಸಿ ತಮ್ಮಣ್ಣ, ಶಾಸಕ ಗೋಪಾಲಯ್ಯ, ಸುರೇಶ್ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಅನಿತಾ ಕುಮಾರಸ್ವಾಮಿ, ರಾಮನಗರ ಕ್ಷೇತ್ರದ ಜನರು ನನ್ನನ್ನ ಗೆಲ್ಲಿಸಿದ್ದಾರೆ. ನಾನು ರಾಮನಗರದ ಕ್ಷೇತ್ರದ ಮೊದಲ ಮಹಿಳಾ ಶಾಸಕಿ. ನನ್ನ ಪತಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಚಿವ ಸ್ಥಾನಕ್ಕೆ ಬೇಡಿಕೆ ಇಡೋದಿಲ್ಲಾ. ಅವಕಾಶ ನೀಡಿದರೆ ಸಮರ್ಥವಾಗಿ ಕೆಲಸ ಮಾಡುತ್ತೇನೆ’ ಅಂತಾ ಹೇಳಿದರು.